Category Archives: RTI

RTI ಗೆ ನಮ್ಮ ಮೆಟ್ರೋ ನವರಿಂದ ಬಂದ ಉತ್ತರಗಳು

ನೀವು ಬೆಂಗಳೂರು ಮೆಟ್ರೋನಲ್ಲಿ ಬಳಸುತ್ತಿರುವ ಭಾಷೆಗಳು ಯಾವ ಸರಕಾರೀ ಆದೇಶದಂತೆ ಎಂಬ ಪ್ರಶ್ನೆಯಿತ್ತು. ಪ್ರಾಯಶಃ ಬೆಂಗಳೂರು ಮೆಟ್ರೋ ನಡೆಸುವವರ ಹತ್ತಿರ ಇದರ ಬಗ್ಗೆ ಉತ್ತರ ಇರಲಿಲ್ಲ. ಸತತ ೨ ವರ್ಷ ಹೋರಾಟದ ನಂತರ ೨೦೧೩ ಅಕ್ಟೋಬರ್ನಲ್ಲಿ ಈ ಆರ್.ಟಿ.ಐ ಅರ್ಜಿಗೆ ಉತ್ತರ ಬಂತು, ಅದೂ ಕರ್ನಾಟಕ ಮಾಹಿತಿ ಆಯೋಗ ಹಾಗು ಕರ್ನಾಟಕದ ಉಚ್ಚ ನ್ಯಾಯಾಲಯದವರೆಗೂ   ಈ ವಿಷಯವನ್ನು ತೆಗೆದು ಕೊಂಡು ಹೋದಾಗ ಮಾತ್ರ.ಬೆಂಗಳೂರು ಮೆಟ್ರೋನವರು ಕೊಟ್ಟ ಉತ್ತರಗಳ ಪ್ರತಿಯನ್ನು  ಇಲ್ಲಿ ಲಗತ್ತಿಸಿದ್ದೇವೆ
ಮೆಟ್ರೋ ನೀಡಿದ ಮೊದಲ ಉತ್ತರ
NM_RTI1_REPLY
  NM_RTI1_REPLY2

ನಮ್ಮ ಮೆಟ್ರೋನ ಮೊದಲ ಉತ್ತರಗಳ ಬಗ್ಗೆ ನಾವು ಕೇಳಿದ ಸ್ಪಷ್ಠೀಕರಣಗಳಿಗೆ ಮೆಟ್ರೋದಿಂದ 13 ಏಪ್ರಿಲ್ 2013 ರಲ್ಲಿ  ಬಂದ ಉತ್ತರ

NM_RTI2_REPLY NM_RTI2_REPLY2 NM_RTI2_REPLY3 NM_RTI2_REPLY4NM_RTI2_REPLY5
ನಮ್ಮ ಮೆಟ್ರೋನ ಮೊದಲ ಉತ್ತರಗಳ ಬಗ್ಗೆ ನಾವು ಕೇಳಿದ ಸ್ಪಷ್ಠೀಕರಣಗಳಿಗೆ ಮೆಟ್ರೋದಿಂದ 29 ಆಗಸ್ಟ್  2013 ರಲ್ಲಿ ಕೊಟ್ಟ ಉತ್ತರ
NM_RTI3_REPLY1 NM_RTI3_REPLY2
Advertisements

ನಮ್ಮ ಮೆಟ್ರೋ: ಮಾಹಿತಿ ಕೋರಿ ಆರ್.ಟಿ.ಐ. ಅರ್ಜಿ.

ನಮ್ಮ ಮೆಟ್ರೋನಲ್ಲಿನ ಭಾಷಾ ನೀತಿಯನ್ನು ತಿಳಿಯಲು ಆರ್.ಟಿ.ಐ ಒಂದನ್ನು ಸಲ್ಲಿಸಿದ್ದು. ಸದರಿ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಇವರು ಕೋರಿರುವ ಮಾಹಿತಿಯ ವಿವರ ಇಂತಿದೆ.

ಅಗತ್ಯವಾಗಿರುವ ಮಾಹಿತಿ

“ನಮ್ಮ ಮೆಟ್ರೋ “ನಲ್ಲಿ ಬಳಕೆಯಾಗಿರುವ ಭಾಷಾನೀತಿಯ ಬಗೆಗಿನ ಕೆಳಗಿನ ಅಂಶಗಳ ಬಗ್ಗೆ ವಿವರಣೆಗಳು ಬೇಕಾಗಿದೆ:

೧. ಬೆಂಗಳೂರಿನ ನಮ್ಮ ಮೆಟ್ರೋಗೆ ಸಂಬಂಧಿಸಿದಂತೆ ನಿಲ್ದಾಣ ಮತ್ತು ರೈಲಿನ ಒಳಗಿನ ಮತ್ತು ರೈಲಿನ ಹೊರಗಿನ ಸೂಚನಾ ಫಲಕಗಳು, ಘೋಷಣೆಗಳು, ಸುರಕ್ಷತಾ ಸೂಚನೆಗಳೇ ಮೊದಲಾದ ಸಾರ್ವಜನಿಕರಿಗೆ ನೀಡಬೇಕಾದ ಗ್ರಾಹಕಸೇವೆಯ ಮಾಹಿತಿಗಳನ್ನು ಯಾವ ಯಾವ ಭಾಷೆಯಲ್ಲಿ ನೀಡಬೇಕೆನ್ನುವ ಬಗ್ಗೆ ಯಾವುದಾದರೂ ನಿಯಮ “BMRCL”ನಲ್ಲಿದೆಯೇ? ಇದ್ದಲ್ಲಿ ಅದರ ಧೃಢೀಕೃತ ನಕಲು ಪ್ರತಿಯನ್ನು ನೀಡಿರಿ.

೨. ಪ್ರಶ್ನೆ ೧ ಕ್ಕೆ ಸಂಬಂದಪಟ್ಟಂತೆ ಗ್ರಾಹಕಸೇವಾ ನಿಯಮವನ್ನು ಜಾರಿಗೊಳಿಸಲು, ತೀರ್ಮಾನವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ?

೩. ಭಾರತದ ಕೇಂದ್ರಸರ್ಕಾರವು ಬೆಂಗಳೂರಿನ “ನಮ್ಮ ಮೆಟ್ರೋ“ ದಲ್ಲಿ ಪ್ರಶ್ನೆ ೧ ರಲ್ಲಿ ಇರುವಂತೆ, ಇಂಥದ್ದೇ ಭಾಷೆಗಳಲ್ಲಿ ಗ್ರಾಹಕಸೇವೆ ನೀಡಬೇಕೆಂದು/ ಕೆಲಸ ಮಾಡಬೇಕೆಂದು ಯಾವುದಾದರೂ ಆದೇಶ/ ಸೂಚನೆ ಹೊರಡಿಸಿದೆಯೇ? ಹಾಗಿದ್ದಲ್ಲಿ ಸದರಿ ಆದೇಶದ/ ಸೂಚನೆಯ ಪತ್ರದ ಧೃಢೀಕೃತ ನಕಲು ಪ್ರತಿಯನ್ನು ಕೊಡಿ.

೪. ಕರ್ನಾಟಕ ರಾಜ್ಯಸರ್ಕಾರ “ನಮ್ಮ ಮೆಟ್ರೋ” ದಲ್ಲಿ ಪ್ರಶ್ನೆ ೧ ರಲ್ಲಿ ಇರುವಂತೆ, ಇಂಥದ್ದೇ ಭಾಷೆಗಳಲ್ಲಿ ಗ್ರಾಹಕ ಸೇವೆ ನೀಡಬೇಕೆಂದು/ ಕೆಲಸ ಮಾಡಬೇಕೆಂದು ಯಾವುದಾದರೂ ಆದೇಶ/ ಸೂಚನೆ ಹೊರಡಿಸಿದೆಯೇ? ಹಾಗಿದ್ದಲ್ಲಿ ಸದರಿ ಆದೇಶದ/ ಸೂಚನೆಯ ಅಧಿಕೃತ ಪತ್ರದ ಧೃಢೀಕೃತ ನಕಲು ಪ್ರತಿಯನ್ನು ಕೊಡಿ.

೫. ಪ್ರಶ್ನೆ ೩ ಮತ್ತು ೪ ಕ್ಕೆ ನಿಮ್ಮ ಉತ್ತರ ಇಲ್ಲ ಎಂದಿದ್ದಲ್ಲಿ, ಇನ್ಯಾವ ಆದೇಶ/ಸೂಚನೆಯ ಮೇರೆಗೆ ಹಿಂದಿ ಬಾಷೆಯಲ್ಲಿ, ನಮ್ಮ ಮೆಟ್ರೋಗೆ ಸಂಬಂಧಿಸಿದಂತೆ ನಿಲ್ದಾಣ ಮತ್ತು ರೈಲಿನ ಒಳಗಿನ ಮತ್ತು ರೈಲಿನ ಹೊರಗಿನ ಸೂಚನಾ ಫಲಕಗಳು, ಘೋಷಣೆಗಳು, ಸುರಕ್ಷತಾ ಸೂಚನೆಗಳೇ ಮೊದಲಾದ ಸಾರ್ವಜನಿಕರಿಗೆ ನೀಡಬೇಕಾದ ಗ್ರಾಹಕಸೇವೆಯ ಮಾಹಿತಿಗಳನ್ನು ಹಾಕಲಾಗಿದೆ? ಇದಕ್ಕೆ ಸಂಬಂಧಿಸಿದ ಆದೇಶ/ ಸೂಚನೆಯ ದಾಖಲೆಯ  ಧೃಢೀಕೃತ ಪ್ರತಿಯನ್ನು ನೀಡಿರಿ.

೬. ನಮ್ಮ ಮೆಟ್ರೋ ಸಿಬ್ಬಂದಿಗಳು ಮತ್ತು ಮೇಟ್ರೋ ನೇಮಕ ಮಾಡಿರುವ ಖಾಸಗೀ ಗುತ್ತಿಗೆ ಸಿಬ್ಬಂದಿಗಳು, ಸಾರ್ವಜನಿಕರ ಜೊತೆ ವ್ಯವಹರಿಸಬೇಕಾದಾಗ – ಸ್ಥಳೀಯ ಭಾಷೆ ಕನ್ನಡದ ಅರಿವು ಹೊಂದಿರಬೇಕೆನ್ನುವ ನಿಬಂಧನೆಯನ್ನು/ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆಯೇ? ಮಾಡಿಕೊಂಡಿದ್ದರೆ ಒಂದು ಅಧಿಕೃತ ಒಪ್ಪಂದದ ಪ್ರತಿಯ ಧೃಢೀಕೃತ ನಕಲು ಪ್ರತಿಯನ್ನು ಕೊಡಿ.

೭. ಪ್ರಶ್ನೆ ೬ ಕ್ಕೆ ಸಂಬಂದಿಸಿದಂತೆ, ನಿಬಂಧನೆ/ಒಪ್ಪಂದ ಮಾಡಿದ್ದರೆ, ಕನ್ನಡದಲ್ಲಿ ಸೇವೆಯನ್ನು ನಿರಾಕರಣೆ ಮಾಡುವ ಸಿಬ್ಬಂದಿ/ ಗುತ್ತಿಗೆದಾರರ ಮೇಲೆ ದೂರನ್ನು ಯಾರಿಗೆ ಸಲ್ಲಿಸಬೇಕು?

೮. ಕನ್ನಡದಲ್ಲಿ ಗ್ರಾಹಕ ಸೇವೆ ನೀಡದ ಬಗ್ಗೆ ದೂರು ಬಂದಲ್ಲಿ ಅಂಥವರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳುವ ಬಗ್ಗೆ ಯಾವುದಾದರೋ ನಿಯಮವಿದೆಯೇ?

Advertisements